Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:8 - ಕನ್ನಡ ಸತ್ಯವೇದವು J.V. (BSI)

8 ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸಗ್ಳ್ಯಾನ್ ಅದ್ದಿ ತುಮಿ ಪಾಟಿ ಫಿಡೆ ಬಗಿನಸ್ತಾನಾ ಎಕಾಮೆಕಾಕ್ ಪ್ರೆಮ್ ಕರುಚೆ, ಕಶ್ಯಾಕ್ ಮಟ್ಲ್ಯಾರ್, ಪ್ರೆಮ್ ಲೈ ಪಾಪಾಕ್ನಿ ಧಾಪ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:8
17 ತಿಳಿವುಗಳ ಹೋಲಿಕೆ  

ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ. ಅದು ಸಮಸ್ತವನ್ನು ಸಂಪೂರ್ಣಮಾಡುವ ಬಂಧವಾಗಿದೆ.


ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು; ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ನಿಮ್ಮಲ್ಲಿ ನಮ್ಮ ಪ್ರೀತಿಯು ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರೊಬ್ಬರ ಮೇಲೆಯೂ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿಹೊಂದಿ ಅತ್ಯಧಿಕವಾಗುವಂತೆ ಕರ್ತನು ಅನುಗ್ರಹಿಸಲಿ.


ಸಹೋದರ ಸ್ನೇಹವು ನೆಲೆಯಾಗಿರಲಿ.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಗಮನಿಸದೆ ಉತ್ತರಕೊಡುವವನು ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.


ಪ್ರಿಯನೇ, ನೀನು ಆತ್ಮ ವಿಷಯದಲ್ಲಿ ಅಭಿವೃದ್ಧಿಹೊಂದಿರುವ ಪ್ರಕಾರ ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ ಸುಕ್ಷೇಮವಾಗಿರಬೇಕೆಂದು ಪ್ರಾರ್ಥಿಸುತ್ತೇನೆ.


ಮುಖ್ಯವಾಗಿ, ನನ್ನ ಸಹೋದರರೇ, ಆಣೆ ಇಡಲೇಬೇಡಿರಿ; ಆಕಾಶದ ಮೇಲಾಗಲಿ ಭೂವಿುಯ ಮೇಲಾಗಲಿ ಇನ್ನಾತರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.


ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು