Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:9 - ಕನ್ನಡ ಸತ್ಯವೇದವು J.V. (BSI)

9 ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗುಣುಗುಟ್ಟದೆ ಅತಿಥಿಸತ್ಕಾರ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಎಕಾಮಾಕಾಕ್ನಿ ತುಮ್ಚ್ಯಾ ಘರಾಕ್ನಿ ಯೆಲ್ಲ್ಯಾ ತನ್ನಾ ಬರೆ ಕರುನ್ ಬಗುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:9
11 ತಿಳಿವುಗಳ ಹೋಲಿಕೆ  

ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಅತಿಥಿಸತ್ಕಾರಮಾಡುವವನೂ ಒಳ್ಳೇದನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ದೇವಭಕ್ತನೂ ಜಿತೇಂದ್ರಿಯನೂ ಆಗಿದ್ದು


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.


ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.


ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ನೀರು ಕುಡಿಸಿದ ಮೇಲೆ - ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದುಕೊಡುತ್ತೇನೆ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು