Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:10 - ಕನ್ನಡ ಸತ್ಯವೇದವು J.V. (BSI)

10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಉಲ್ಲೊ ಕಸ್ಟ್ ತುಮಿ ಸೊಸುನ್ ಹೊಲ್ಲ್ಯಾ ಮಾನಾ ಸಗ್ಳ್ಯಾ ಕುರ್ಪೆಚೊ ದೆವ್ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಪ್ನಾಚ್ಯಾ ಅಂತ್ ನಸಲ್ಲ್ಯಾ ಮಹಿಮೆತ್ ವಾಟೊ ಘೆವ್ಕ್ ತುಮ್ಕಾ ಬಲ್ವುತಾ, ತೊ ಅಪ್ನಿಚ್ ತುಮ್ಕಾ ಪರಿಪುರ್ನ್ ಕರ್ತಾ ಅನಿ ಆಧಾರ್ ದಿತಾ, ಅನಿ ಬಳ್ ದಿತಾ ಘಟ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:10
39 ತಿಳಿವುಗಳ ಹೋಲಿಕೆ  

ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ ನನ್ನನ್ನು ಚೈತನ್ಯಗೊಳಿಸುವಿ; ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈ ಚಾಚುವಿ; ನಿನ್ನ ಬಲಗೈ ನನ್ನನ್ನು ರಕ್ಷಿಸುವದು.


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಸಕಲ ಸತ್ಕಾರ್ಯದಲ್ಲಿಯೂ ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ಆ ಸ್ಥಿರಚಿತ್ತವನ್ನೂ ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮಗೆ ದಯಪಾಲಿಸಲಿ.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು.


ಮನೋವ್ಯಥೆಯಿಂದ ಕಣ್ಣೀರುಸುರಿಸುತ್ತೇನೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು