1 ಪೇತ್ರನು 5:5 - ಕನ್ನಡ ಸತ್ಯವೇದವು J.V. (BSI)5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಸೆಚ್ ತುಮಿ ದಾಂಡ್ಗ್ಯಾ ಲೊಕಾನು ತುಮಿ ಜಾನ್ತ್ಯಾಕ್ನಿ ಖಾಯ್ಲ್ ಹೊವ್ನ್ ಚಲಾ, ಅನಿ ತುಮಿ ಸಗ್ಳೆ ಜಾನಾ ಖಾಯ್ಲ್ ಚಲ್ತಲೆ ಮನ್ತಲಿ ಅಂಗಿ ನೆಸಾ ಅಸೆ ಎಕಾಮೆಕಾಚಿ ಸೆವಾ ಕರಿಸಾರ್ಕೆ ಹೊಂವ್ದಿ, ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ ಗರುಕಿ ಕರ್ತಲ್ಯಾಕ್ನಿ ದೆವ್ ವಿರೊದ್ ಕರ್ತಾ, ಖರೆ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ದೆವ್ ಕುರ್ಪಾ ದಿತಾ. ಅಧ್ಯಾಯವನ್ನು ನೋಡಿ |