Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:15 - ಕನ್ನಡ ಸತ್ಯವೇದವು J.V. (BSI)

15 ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಣ ಪ್ರೀತಿಯು ಅವನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಲೋಕಕ್ಕೂ ಲೌಕಿಕವಾದವುಗಳಿಗೂ ನೀವು ಒಲಿಯಬಾರದು. ಈ ಲೋಕವನ್ನು ಒಲಿದರೆ ಪಿತನಲ್ಲಿ ನಿಮಗೆ ಒಲವಿಲ್ಲವೆಂದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಲೋಕವನ್ನಾಗಲಿ ಈ ಲೋಕದಲ್ಲಿರುವ ವಸ್ತುಗಳನ್ನಾಗಲಿ ನೀವು ಪ್ರೀತಿಸಬೇಡಿ. ಈ ಲೋಕವನ್ನು ಪ್ರೀತಿಸುವವನಿಗೆ ತಂದೆಯ (ದೇವರ) ಮೇಲೆ ಪ್ರೀತಿಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಲೋಕವನ್ನಾಗಲಿ, ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಹ್ಯಾ ಜಗಾಚೊ ಹೊಂವ್ದಿತ್, ಜಗಾತ್ ಹೊತ್ತ್ಯಾ ಸಾಮಾನಾಂಚೊ ಹೊಂವ್ದಿತ್, ಪ್ರೆಮ್ ಕರುನಕಾಸಿ, ಹ್ಯಾ ಜಗಾಚೊ ಪ್ರೆಮ್ ಕರ್ತಲ್ಯಾಕ್ ದೆವಾ ಬಾಬಾಚ್ಯಾ ವರ್ತಿ ಪ್ರೆಮ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:15
15 ತಿಳಿವುಗಳ ಹೋಲಿಕೆ  

ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ ಅಂದನು.


ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.


ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.


ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗಂದರೆ ದೇವರು ತನ್ನ ಮಗನ ವಿಷಯವಾಗಿ ಹೇಳಿರುವ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ -


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು