Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:2 - ಕನ್ನಡ ಸತ್ಯವೇದವು J.V. (BSI)

2 ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕ್ರಿಸ್ತಾಚ್ಯಾ ಎಕ್ಲ್ಯಾಚ್ಯಾ ವೈನಾ ಅಮ್ಚಿ ಪಾಪಾ ಮಾಪ್ ಹೊಲಾತ್, ಅಮ್ಚಿ ಎವ್ಡಿಚ್ ನ್ಹಯ್ ಸಗ್ಳ್ಯಾ ಜಗಾಚಿ ಪಾಪಾಬಿ ಮಾಪ್ ಹೊಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:2
17 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು