Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:20 - ಕನ್ನಡ ಸತ್ಯವೇದವು J.V. (BSI)

20 ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ತುಮಿ ಕ್ರಿಸ್ತಾಚ್ಯಾ ವೈನಾ ವೊತಲ್ಲ್ಯಾ ಪವಿತ್ರ್ ಆತ್ಮ್ಯಾಕ್ ಘೆಟ್ಲ್ಯಾಸಿ ಅನಿ ತಸೆ ಹೊವ್ನ್ ತುಮ್ಕಾ ಖರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:20
28 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಕೆಟ್ಟವರು ನ್ಯಾಯವನ್ನು ಗ್ರಹಿಸರು; ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ


ದೇವರು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸಿದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳುತ್ತೇವೆ.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ.


ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲ್ಯರ ಸದಮಲಸ್ವಾವಿುಯೇ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಒಂದೇ ಊರಿನವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಕರ್ತನ ಜ್ಞಾನವನ್ನು ಪಡೆಯಿರಿ ಎಂದು ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು;


ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.


ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.


ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು