1 ಯೋಹಾನನು 2:22 - ಕನ್ನಡ ಸತ್ಯವೇದವು J.V. (BSI)22 ಯೇಸುವು ಕ್ರಿಸ್ತನಲ್ಲ ಎನ್ನುವವನು ಸುಳ್ಳುಗಾರನಲ್ಲವಾದರೆ ಸುಳ್ಳುಗಾರನು ಬೇರೆ ಎಲ್ಲಿದ್ದಾನೆ? ಯಾವನಾದರೂ ತಾನು ತಂದೆಯನ್ನೂ ಮಗನನ್ನೂ ಅರಿಯೆನು ಎಂದು ಹೇಳಿದರೆ ಅವನೇ ಕ್ರಿಸ್ತ ವಿರೋಧಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸುಳ್ಳುಗಾರನು ಯಾರು? ಮನುಷ್ಯನಾಗಿ ಬಂದ ಯೇಸುವು ಕ್ರಿಸ್ತ ಅಲ್ಲ ಎಂದು ಯಾವನು ಅಲ್ಲಗಳೆಯುತ್ತಾನೋ ಅವನೇ ಸುಳ್ಳುಗಾರನು. ಅವನೇ ತಂದೆಯನ್ನೂ ಮಗನನ್ನೂ ಅಲ್ಲಗಳೆಯುವ ಕ್ರಿಸ್ತವಿರೋಧಿಯಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತೆಚ್ಯಾಸಾಟ್ನಿ ಝುಟೊ ಮಟ್ಲ್ಯಾರ್ ಕೊನ್? ಜೆಜು ಕ್ರಿಸ್ತ್ ನ್ಹಯ್ ಮನುನ್ ಮಾನಿನಸಲ್ಲೊ. ಮನುನ್ ಅನಿ ಜೊ ಕೊನ್ ಬಾಬಾಕ್ ಹೊಂವ್ದಿತ್ ಲೆಕಾಕ್ ಹೊಂವ್ದಿತ್ ವಳ್ಕಿನಾ ಮನುನ್ ಸಾಂಗ್ತಾ ತೊಚ್ ಕ್ರಿಸ್ತ್ ವಿರೊಧಿ. ಅಧ್ಯಾಯವನ್ನು ನೋಡಿ |