1 ಯೋಹಾನನು 2:24 - ಕನ್ನಡ ಸತ್ಯವೇದವು J.V. (BSI)24 ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ ಬೋಧನೆಯು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀವು ಆರಂಭದಿಂದಲೂ ಕೇಳಿರುವ ಬೋಧನೆಯನ್ನೇ ಅನುಸರಿಸಿರಿ. ಆ ಬೋಧನೆಯನ್ನು ಅನುಸರಿಸುವವರಾಗಿದ್ದರೆ ನೀವು ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಆರಂಬಾಕ್ನಾ ತುಮಿ ಆಯ್ಕಲ್ಲಿ ಸಂಗ್ತಿಯಾ ಮನಾತ್ನಿ ಥವ್ನ್ ಘೆವಾ, ಹೆ ಸಗ್ಳೆ ತುಮ್ಚ್ಯಾ ಮನಾತ್ ರ್‍ಹಾಲ್ಯಾರ್ ಬಾಬಾಚ್ಯಾ ಅನಿ ಲೆಕಾಚ್ಯಾ ವಾಂಗ್ಡಾ ತುಮಿಬಿ ಎಕ್ ಹೊವ್ನ್ ರ್‍ಹಾತ್ಯಾಸಿ. ಅಧ್ಯಾಯವನ್ನು ನೋಡಿ |