Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:25 - ಕನ್ನಡ ಸತ್ಯವೇದವು J.V. (BSI)

25 ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕ್ರಿಸ್ತಾನ್ ಅಮ್ಕಾ ದಿಲ್ಲಿ ಗೊಸ್ಟ್ ಕಾಯ್ ಮಟ್ಲ್ಯಾರ್, ಕನ್ನಾಚ್ ಮರಾನ್ ನಸಲ್ಲೆ ಜಿವನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:25
25 ತಿಳಿವುಗಳ ಹೋಲಿಕೆ  

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.


ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಅವನಿಗೆ ಈಗಿನ ಕಾಲದಲ್ಲಿ ಅನೇಕ ಪಾಲು ಹೆಚ್ಚಾದವುಗಳು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು ಎಂದು ಹೇಳಿದನು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.


ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು