Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:29 - ಕನ್ನಡ ಸತ್ಯವೇದವು J.V. (BSI)

29 ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದ್ದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದೆವ್ ನಿತಿವಂತ್ ಮನುನ್ ತುಮ್ಕಾ ಗೊತ್ತ್ ರ್‍ಹಾಲ್ಯಾರ್, ನಿತಿನ್ ಚಲ್ತಾ ತೊ ಹರ್ ಎಕ್ಲೊ ದೆವಾಚೊ ಪೊರ್ ಮನುನ್ ತುಮ್ಕಾ ಗೊತ್ತ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:29
28 ತಿಳಿವುಗಳ ಹೋಲಿಕೆ  

ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿಯು ದೇವರಿಂದಾಗಿದೆ, ಮತ್ತು ಪ್ರೀತಿಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಯಾಕಂದರೆ ದೇವರಿಂದ ಹುಟ್ಟಿರುವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥದು ನಮ್ಮ ನಂಬಿಕೆಯೇ.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಆಮೇಲೆ ಅವನು - ನಮ್ಮ ಪಿತೃಗಳ ದೇವರು ತನ್ನ ಚಿತ್ತವನ್ನು ನೀನು ತಿಳುಕೊಳ್ಳುವದಕ್ಕೂ ಆ ನೀತಿವಂತನನ್ನು ನೋಡುವದಕ್ಕೂ ಆತನ ಬಾಯಿಂದ ಒಂದು ಮಾತನ್ನು ಕೇಳುವದಕ್ಕೂ ನಿನ್ನನ್ನು ನೇವಿುಸಿದ್ದಾನೆ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.


ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿನ ಅರ್ಥವು ನೀತಿರಾಜ ಎಂಬದು; ಇದಲ್ಲದೆ ಅವನು ಸಾಲೇವಿುನರಾಜ ಅಂದರೆ ಸಮಾಧಾನರಾಜ;


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು