Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:10 - ಕನ್ನಡ ಸತ್ಯವೇದವು J.V. (BSI)

10 ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆಚ್ಯಾ ವೈನಾ ದೆವಾಚಿ ಅನಿ ಸೈತಾನಾಚಿ ಪೊರಾ ಕೊನ್ ಮನುನ್ ಕಳ್ತಾ, ನಿತಿನ್ ಚಲಿನಸಲ್ಲೊ ಅಪ್ನಾಚ್ಯಾ ಭಾವಾಕ್ನಿ ಪ್ರೆಮಾನ್ ಬಗಿನಸಲ್ಲೊ ದೆವಾಕ್ ಸಮಂದ್ ಪಡಿನಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:10
26 ತಿಳಿವುಗಳ ಹೋಲಿಕೆ  

ಪ್ರೀತಿಯಿಲ್ಲದವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಸ್ವರೂಪಿಯು.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಹೊಲವಂದರೆ ಈ ಲೋಕ; ಒಳ್ಳೆಯ ಬೀಜವಂದರೆ ಪರಲೋಕ ರಾಜ್ಯದವರು; ಹಣಜಿ ಅಂದರೆ ಸೈತಾನನವರು;


ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.


ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ತಿಳಿದುಕೊಳ್ಳುತ್ತೇವೆ.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ಎಲೋ, ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕುಮಾಡುವದನ್ನು ಬಿಡುವದಿಲ್ಲವೋ?


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇ ಮಾತನ್ನಾಗಲಿ ಕೆಟ್ಟ ಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ಧರ್ಮಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.


ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ. ಅದು ಸಮಸ್ತವನ್ನು ಸಂಪೂರ್ಣಮಾಡುವ ಬಂಧವಾಗಿದೆ.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು