Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:13 - ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ಈ ಲೋಕದ ಜನರು ನಿಮ್ನನ್ನು ದ್ವೇಷಿಸುವಾಗ ಆಶ್ಚರ್ಯಗೊಳ್ಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಪ್ರಿಯರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಭಾವಾನು ಅನಿ ಭೆನಿಯಾನು, ಹ್ಯಾ ಜಗಾಚಿ ಲೊಕಾ ತುಮ್ಕಾ ವಿರೊದ್ ಕರ್ತಾನಾ ಅಜಾಪ್ ಹೊವ್ನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:13
18 ತಿಳಿವುಗಳ ಹೋಲಿಕೆ  

ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ಇದಲ್ಲದೆ ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವದಕ್ಕೆ ಮನಸ್ಸುಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ನೀವು ಹೊಸದಾಗಿ ಹುಟ್ಟಬೇಕು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.


ಆಗ ಆ ದೇವದೂತನು ನನಗೆ ಹೇಳಿದ್ದು - ನೀನೇಕೆ ಆಶ್ಚರ್ಯಪಟ್ಟಿ? ಆ ಸ್ತ್ರೀಯಿಂದಲೂ ಅವಳ ವಾಹನವಾಗಿದ್ದು ಏಳು ತಲೆಗಳೂ ಹತ್ತು ಕೊಂಬುಗಳೂ ಉಳ್ಳ ಮೃಗದಿಂದಲೂ ಸೂಚಿತವಾದ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.


ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು