1 ಯೋಹಾನನು 3:17 - ಕನ್ನಡ ಸತ್ಯವೇದವು J.V. (BSI)17 ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜಗಾತ್ ಕೊನ್ ತರ್ ಎಕ್ಲೊ ಸಾವ್ಕಾರ್ ರ್‍ಹಾತಾ ಅನಿ ತೊ ಭಾವ್ ನಾತರ್ ಭೆನ್ ಗರ್ಜೆತ್ ಹೊತ್ತೆ ಬಗ್ತಾ, ಅನಿ ತೆಚ್ಯಾ ಗರ್ಜೆಕ್ ಪಾಯ್ನಾ, ತೆಚ್ಯಾಕ್ಡೆ ದೆವಾಚೊ ಪ್ರೆಮ್ ಕಸೊ ರ್‍ಹಾವ್ಕ್ ಹೊತಾ? ಅಧ್ಯಾಯವನ್ನು ನೋಡಿ |