1 ಯೋಹಾನನು 3:24 - ಕನ್ನಡ ಸತ್ಯವೇದವು J.V. (BSI)24 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ದೆವಾಚಿ ಹುಕುಮಾ ಮಾನುನ್ ಘೆವ್ನ್ ಚಲ್ತಲೊ ದೆವಾಚ್ಯಾ ವಾಂಗ್ಡಾ ರ್‍ಹಾತಾ ಅನಿ ದೆವ್ ತೆಚ್ಯಾ ಭುತ್ತುರ್ ರ್‍ಹಾತಾ, ತೆನಿ ಅಮ್ಕಾ ದಿಲ್ಲ್ಯಾ ತ್ಯಾ ಪವಿತ್ರ್ ಆತ್ಮ್ಯಾಚ್ಯಾ ದೆನ್ಯಾ ವೈನಾ ದೆವ್ ಅಮ್ಚ್ಯಾ ವಾಂಗ್ಡಾ ಜಿವನ್ ಕರ್ತಾ ಮನ್ತಲೆ ಅಮ್ಕಾ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |