Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:3 - ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕ್ರಿಸ್ತಾಚ್ಯಾ ವರ್ತಿ ಬರೊಸೊ ಥವ್ನ್ ಹೊತ್ತೊ, ಹರ್ ಎಕ್ಲೊಬಿ ಕಸೊ ದೆವ್ ನಿತಳ್ ಹೊವ್ನ್ ಹಾಯ್ ತಸೊಚ್ ಅಪ್ನಿಬಿ ನಿತಳ್ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:3
21 ತಿಳಿವುಗಳ ಹೋಲಿಕೆ  

ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ನಿಮ್ಮ ತಂದೆ ಕರುಣವುಳ್ಳವನಾಗಿರುವ ಪ್ರಕಾರವೇ ನೀವೂ ಕರುಣವುಳ್ಳವರಾಗಿರಿ.


ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಮತ್ತೊಂದು ಸ್ಥಳದಲ್ಲಿ ಯೆಶಾಯನು ಹೇಳುವದೇನಂದರೆ - ಇಷಯನ ಅಂಕುರದವನು ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ; ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.


ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ.


ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು