Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:4 - ಕನ್ನಡ ಸತ್ಯವೇದವು J.V. (BSI)

4 ಪಾಪಮಾಡುವ ಪ್ರತಿಯೊಬ್ಬನು ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪಾಪ ಮಾಡುವವನು ದೇವರ ಕಟ್ಟಳೆಗಳನ್ನು ಉಲ್ಲಂಘಿಸುವವನಾಗಿದ್ದಾನೆ. ಹೌದು, ಪಾಪಮಾಡುವುದಕ್ಕೂ ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ಜೀವಿಸುವುದಕ್ಕೂ ಯಾವ ವ್ಯತ್ಯಾಸವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೊ ಕೊನ್ ಪಾಪ್ ಕರ್ತಾ ತೊ ದೆವಾಚೊ ಖಾಯ್ದೊ ಮೊಡ್ತಾ, ಕಶ್ಯಾಕ್ ಮಟ್ಲ್ಯಾರ್, ಖಾಯ್ದೊ ಮೊಡ್ತಲೆಚ್ ಪಾಪ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:4
17 ತಿಳಿವುಗಳ ಹೋಲಿಕೆ  

ನೀತಿಗೆ ವಿರುದ್ಧವಾದದ್ದೆಲ್ಲಾ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ತೆಗೆದು ಹಾಕಲ್ಪಡಲೇಬೇಕು; ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.


ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.


ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.


ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು.


ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.


ಪೌಲನು ಅವನಿಗೆ - ಎಲೈ ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರಾನುಸಾರವಾಗಿ ನನ್ನ ವಿಚಾರಣೆ ಮಾಡುವದಕ್ಕೆ ಕೂತುಕೊಂಡು ಧರ್ಮಶಾಸ್ತ್ರ ವಿರುದ್ಧವಾಗಿ ನನ್ನನ್ನು ಹೊಡೆಯುವದಕ್ಕೆ ಅಪ್ಪಣೆಕೊಡುತ್ತೀಯೋ? ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು