Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:7 - ಕನ್ನಡ ಸತ್ಯವೇದವು J.V. (BSI)

7 ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪೊರಾನು, ಕೊನ್ಬಿ ತುಮ್ಕಾ ಪಸ್ವಿನಾ ಸಾರ್ಕೆ ಹುರ್ಶ್ಯಾಕಿನ್ ರ್‍ಹಾವಾ, ಕ್ರಿಸ್ತ್ ನಿತಿವಂತ್ ಹೊವ್ನ್ ಹಾಯ್ ತಸೊ ಕೊನ್ ನಿತಿವಂತ್ ಹೊವ್ನ್ ಜಿವನ್ ಕರ್ತಾ ತೊಚ್ ಖರೊ ನಿತಿವಂತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:7
28 ತಿಳಿವುಗಳ ಹೋಲಿಕೆ  

ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರ ವಿಷಯವಾಗಿ ಈ ಸಂಗತಿಗಳನ್ನು ನಿಮಗೆ ಬರೆದಿದ್ದೇನೆ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ ನೀತಿಯನ್ನು ಪಾಲಿಸುವವರೂ ಧನ್ಯರು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.


ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿನ ಅರ್ಥವು ನೀತಿರಾಜ ಎಂಬದು; ಇದಲ್ಲದೆ ಅವನು ಸಾಲೇವಿುನರಾಜ ಅಂದರೆ ಸಮಾಧಾನರಾಜ;


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು