Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:11 - ಕನ್ನಡ ಸತ್ಯವೇದವು J.V. (BSI)

11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರಿಯ ಸ್ನೇಹಿತರೇ, ಹೀಗೆ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ಆದ್ದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪ್ರಿತಿಚ್ಯಾನು, ದೆವಾನ್ ಅಮ್ಕಾ ಎವ್ಡೊ ಪ್ರೆಮ್ ಕರಲ್ಲ್ಯಾ ವೈನಾ, ಅಮಿಬಿ ಎಕಾಮೆಕಾಚೊ ಪ್ರೆಮ್ ಕರುಚೆ ಮನ್ತಲ್ಯಾ ಮುಲಾಜಾತ್ ಹಾವ್..

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:11
14 ತಿಳಿವುಗಳ ಹೋಲಿಕೆ  

ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ.


ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ; ಏನಂದರೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು; ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬದೇ.


ದೇವರ ಆಜ್ಞೆ ಯಾವದಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಕ್ರಿಸ್ತನು ನಮಗೆ ಅಪ್ಪಣೆ ಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.


ಆ ಧರ್ಮೋಪದೇಶಕನು - ಅವನಿಗೆ ದಯತೋರಿಸಿದವನೇ ಅಂದನು. ಆಗ ಯೇಸು ಅವನಿಗೆ - ಹೋಗು, ನೀನೂ ಅದರಂತೆ ಮಾಡು ಎಂದು ಹೇಳಿದನು.


ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಪ್ರಿಯರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ. ಮೊದಲಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ನೀವು ಕೇಳಿದ ವಾಕ್ಯವೇ.


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾಕ್ಯವಾಗಿದೆ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿಯು ದೇವರಿಂದಾಗಿದೆ, ಮತ್ತು ಪ್ರೀತಿಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.


ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ ಮೊದಲಿನಿಂದಲೂ ನಮಗೆ ಬಂದ ಆಜ್ಞೆಯನ್ನು ಬರೆಯುವವನಾಗಿ - ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು