Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:18 - ಕನ್ನಡ ಸತ್ಯವೇದವು J.V. (BSI)

18 ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ಪ್ರೀತಿಯು ಎಲ್ಲಿರುವುದೋ ಅಲ್ಲಿ ಭಯವಿರುವುದಿಲ್ಲ. ಏಕೆಂದರೆ ದೇವರ ಪರಿಪೂರ್ಣ ಪ್ರೀತಿಯು ಭಯವನ್ನು ತೆಗೆದುಹಾಕುತ್ತದೆ. ದೇವರ ದಂಡನೆಯೇ ಒಬ್ಬ ವ್ಯಕ್ತಿಯಲ್ಲಿ ಭಯವನ್ನು ಉಂಟುಮಾಡುವಂಥದ್ದು. ಆದ್ದರಿಂದ ಭಯವಿರುವವನಲ್ಲಿ ದೇವರ ಪ್ರೀತಿ ಪರಿಪೂರ್ಣವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪ್ರೆಮ್ ಹೊತ್ತ್ಯಾಕ್ಡೆ ಭಿಂಯೆ ನಾ. ಭಿಂಯೆ ಹೊತ್ತ್ಯಾಕ್ಡೆ ತರಾಸ್ ರ್‍ಹಾತಾ, ಖರೆ, ಪುರಾ ಹೊಲ್ಲೊ ಪ್ರೆಮ್ ಭಿಂಯಾಕ್ ಪಳ್ಸುನ್ ಘಾಲ್ತಾ, ಭಿಂಯಾತಲೊ ಕನ್ನಾಚ್ ಪ್ರೆಮಾತ್ ಪುರಾ ಹೊಲ್ಲೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:18
11 ತಿಳಿವುಗಳ ಹೋಲಿಕೆ  

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನಿಂದಾಗುವ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಆದರೆ ಫರಿಸಾಯರು - ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು