Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:5 - ಕನ್ನಡ ಸತ್ಯವೇದವು J.V. (BSI)

5 ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಜಗಾಕ್ ಬಗುನ್ ಜಗಾಚ್ಯಾ ನಮನಿಚ್ ಬೊಲ್ತ್ಯಾತ್ ಅನಿ ಹ್ಯೊ ಜಗ್ ತೆನಿ ಸಾಂಗ್ತಲ್ಯಾಕ್ ಕಾನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:5
15 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರು ಲೋಕದವರಲ್ಲ.


ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು