Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:10 - ಕನ್ನಡ ಸತ್ಯವೇದವು J.V. (BSI)

10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗಂದರೆ ದೇವರು ತನ್ನ ಮಗನ ವಿಷಯವಾಗಿ ಹೇಳಿರುವ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಚ್ಯಾ ಲೆಕಾಚ್ಯಾ ವರ್ತಿ ವಿಶ್ವಾಸ್ ಥವಲ್ಲೊ, ತಿ ಸಾಕ್ಷಿ ಅಪ್ನಾಚ್ಯಾ ಮನಾತ್ ಭುತ್ತುರ್ ಥವ್ನ್ ಘೆತಾ; ಜೆ ಕೊನ್ ಮಾನಿನಾ ತೆಕಾ ದೆವಾನುಚ್ ಝುಟೊ ಕರ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಪ್ನಾಚ್ಯಾ ಲೆಕಾಚ್ಯಾ ವಿಶಯಾತ್ ದಿಲ್ಲ್ಯಾ ಸಾಕ್ಷಿಕ್ ತೆನಿ ವಿಶ್ವಾಸ್ ಕರುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:10
22 ತಿಳಿವುಗಳ ಹೋಲಿಕೆ  

ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡದ್ದೂ ಇಲ್ಲ; ಆತನು ಕಳುಹಿಸಿಕೊಟ್ಟವನ ಮಾತನ್ನು ನೀವು ನಂಬದೆ ಇದ್ದೀರಷ್ಟೆ.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ ಮತ್ತು ಆತನ ವಾಕ್ಯವು ನಮ್ಮಲ್ಲಿ ಇಲ್ಲ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವದು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು


ಇದಲ್ಲದೆ ಉದಯಸೂಚಕ ನಕ್ಷತ್ರವನ್ನು ಅವನಿಗೆ ಕೊಡುವೆನು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ [ನಿಮ್ಮಲ್ಲಿ] ಯಾರು ಸ್ಥಾಪಿಸಬಲ್ಲರು?


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]


ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.


ಆದರೆ ನಾನು ಹೇಳುವದೇನಂದರೆ ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆ ಇರುವನೇ ಹೊರತು ಬೇರೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು