Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:16 - ಕನ್ನಡ ಸತ್ಯವೇದವು J.V. (BSI)

16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕೊನ್ ತರ್ಬಿ ಅಪ್ಲೊ ಭಾವ್ ಪಾಪ್ ಕರ್ತಲೆ ಬಗಟ್ಲ್ಯಾರ್, ಅನಿ ತೊ ತ್ಯಾ ಪಾಪಾತ್ ಭಾಗಿಧಾರ್ ನ್ಹಯ್ ಹೊಲ್ಯಾರ್, ತ್ಯಾ ಭಾವಾಚ್ಯಾಸಾಟ್ನಿ ಮಾಗ್ನಿ ಕರುಂದಿತ್, ತನ್ನಾ ದೆವ್ ತ್ಯಾ ಪಾಪಿ ಮಾನ್ಸಾಕ್ ಜಿವನ್ ದಿತಾ. ಸದಾ ಸರ್ವತಾಕ್ ರ್‍ಹಾತಲ್ಯಾ ಮರ್ನಾಕ್ಡೆ ಚಾಲ್ವುತಲೊ ಪಾಪ್ ಕರ್ತಲ್ಯಾಂಚ್ಯಾ ವಿಶಯಾತ್ ಮಿಯಾ ಸಾಂಗ್ತಾ , ಹ್ಯೊ ಪಾಪ್ ಕರ್ತಲ್ಯಾಂಚ್ಯಾಸಾಟ್ನಿ ತುಮಿ ಮಾಗ್ನಿ ಕರುಚೆ ಮನುನ್ ಮಿಯಾ ಸಾಂಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:16
32 ತಿಳಿವುಗಳ ಹೋಲಿಕೆ  

ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಮನುಷ್ಯಕುಮಾರನ ಮೇಲೆ ಏನಾದರೂ ಮಾತಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವದು; ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.


ಮತ್ತು ಯೆಹೋವನು ನನಗೆ - ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.


ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ.


ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ನಾನು ಇವರಿಗೋಸ್ಕರ ಕೇಳಿಕೊಳ್ಳುತ್ತೇನೆ; ಲೋಕಕ್ಕೋಸ್ಕರ ಕೇಳಿಕೊಳ್ಳದೆ ನೀನು ನನಗೆ ಕೊಟ್ಟವರಿಗೋಸ್ಕರವೇ ಕೇಳಿಕೊಳ್ಳುತ್ತೇನೆ; ನಿನ್ನವರಾಗಿದ್ದಾರೆ.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಆಗ ಮೋಶೆ ಯೆಹೋವನಿಗೆ - ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ ಎಂದು ಮೊರೆಯಿಟ್ಟನು.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ನೀತಿಗೆ ವಿರುದ್ಧವಾದದ್ದೆಲ್ಲಾ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು