1 ಯೋಹಾನನು 5:20 - ಕನ್ನಡ ಸತ್ಯವೇದವು J.V. (BSI)20 ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ದೆವಾಚ್ಯಾ ಲೆಕಾನ್ ಹ್ಯಾ ಜಗಾಕ್ ಯೆವ್ನ್ ಅಮಿ ಖರ್ಯಾ ದೆವಾಕ್ ವಳ್ಕುನ್ ಘೆಯ್ ಸಾರ್ಕೆ ಅಮ್ಕಾ ಬುದ್ದ್ ದಿಲ್ಯಾನ್ ಮನುನ್ ಅಮ್ಕಾ ಗೊತ್ತ್ ಹಾಯ್, ಅನಿ ದೆವಾಚ್ಯಾ ಲೆಕಾ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಅಮಿ ಹಾವ್, ಹ್ಯೊಚ್ ಖರ್ಯಾ ದೆವಾಚ್ಯಾ ವಾಂಗ್ಡಾ ಅಮಿ ಹಾತ್, ಹ್ಯೊಚ್ ಖರೊ ದೆವ್ ಅನಿ ಶಾಶ್ವತ್ ಜಿವ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |