Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:8 - ಕನ್ನಡ ಸತ್ಯವೇದವು J.V. (BSI)

8 ಆತ್ಮ ನೀರು ರಕ್ತ ಎಂಬ ಮೂರು ಸಾಕ್ಷಿಗಳುಂಟು; ಈ ಮೂರು ಒಂದೇ ಅಭಿಪ್ರಾಯವಾಗಿ ಸಾಕ್ಷಿಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ಪವಿತ್ರಾತ್ಮ, ಜಲ ಮತ್ತು ರಕ್ತವೆಂಬ ಮೂರು ಸಾಕ್ಷಿಗಳು ಇವೆ. ಈ ಮೂರೂ ಕೊಡುವ ಸಾಕ್ಷ್ಯ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತ್ಮ, ನೀರು ಮತ್ತು ರಕ್ತ. ಈ ಮೂರು ಸಾಕ್ಷಿಗಳ ಅಭಿಪ್ರಾಯವು ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪವಿತ್ರ್ ಆತ್ಮೊ, ಪಾನಿ ಅನಿ ರಗಾತ್; ಹ್ಯಾ ತಿಗ್ಯಾಂಚೊಬಿ ಎಕುಚ್ ಅಬಿಪ್ರಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:8
14 ತಿಳಿವುಗಳ ಹೋಲಿಕೆ  

ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ಬಹುಮಂದಿ ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಬೀಳಲಿಲ್ಲ.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗಂದರೆ -


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.


ಒಂದು ಸಾರಿ ಜ್ಞಾನಪ್ರಕಾಶದಲ್ಲಿ ಸೇರಿ ಪರಲೋಕದಿಂದಾದ ದಾನದ ಅನುಭವವನ್ನು ಹೊಂದಿ


ಆದರೂ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ತಿವಿದ ಕೂಡಲೆ ರಕ್ತವೂ ನೀರೂ ಹೊರಟಿತು.


ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುತ್ತೇವಲ್ಲಾ; ದೇವರ ಸಾಕ್ಷಿಯು ಅದಕ್ಕಿಂತ ವಿಶೇಷವಾಗಿದೆ. ದೇವರು ಕೊಟ್ಟ ಸಾಕ್ಷಿ ಏನಂದರೆ ಆತನು ತನ್ನ ಮಗನ ವಿಷಯದಲ್ಲಿ ಹೇಳಿದ್ದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು