Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:17 - ಕನ್ನಡ ಸತ್ಯವೇದವು J.V. (BSI)

17 ಆಗ ಏಲಿಯು ಆಕೆಗೆ - ಸಮಾಧಾನದಿಂದ ಹೋಗು; ಇಸ್ರಾಯೇಲ್ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ ಎನ್ನಲು ಹನ್ನಳು ಏಲಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:17
14 ತಿಳಿವುಗಳ ಹೋಲಿಕೆ  

ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ಅವನು - ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು ಅಂದನು.


ಎಲೀಷನು ಅವನಿಗೆ - ಸಮಾಧಾನದಿಂದ ಹೋಗು ಎಂದು ಉತ್ತರಕೊಟ್ಟನು. ಅವನು ಹೊರಟು ಹೋದನು.


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.


ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿ ಅದೆ; ಸಮಾಧಾನದಿಂದ ಹೋಗು ಎಂದು ಹೇಳಿದನು.


ಆತನು ಆಕೆಗೆ - ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವದಿಲ್ಲ; ಆದದರಿಂದ ನೀನು ಸಮಾಧಾನದಿಂದ ಹಿಂದಿರುಗಿಹೋಗು; ಅವರನ್ನು ಸಿಟ್ಟುಗೊಳಿಸಬಾರದು ಎಂದು ಹೇಳಲು ದಾವೀದನು ಆಕೀಷನಿಗೆ -


ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು ಎಂದು ಹೇಳಿದಳು.


ಆಕೆಯ ಗಂಡನಾದ ಎಲ್ಕಾನನು ಆಕೆಗೆ - ನಿನಗೆ ಸರಿತೋರುವ ಪ್ರಕಾರ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.


ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು.


ಅರಸನು - ಹೋಗು, ನಿನಗೆ ಶುಭವಾಗಲಿ ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು