Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:18 - ಕನ್ನಡ ಸತ್ಯವೇದವು J.V. (BSI)

18 ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆಮೇಲೆ ಆಕೆಯ ಮೋರೆಯಲ್ಲಿ ದುಃಖವು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ. ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕವಳು, “ನಿನ್ನ ಸೇವಕಿಗೆ ನಿನ್ನ ದೃಷ್ಟಿಯಲ್ಲಿ ದಯೆ ತೋರಲಿ,” ಎಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು. ಆಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:18
11 ತಿಳಿವುಗಳ ಹೋಲಿಕೆ  

ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ನೀವು ಇದುವರೆಗೆ ನನ್ನ ಹೆಸರಿನ ಮೇಲೆ ಯಾವದೊಂದನ್ನೂ ಬೇಡಿಕೊಂಡಿಲ್ಲ; ಬೇಡಿಕೊಳ್ಳಿರಿ, ನಿಮಗೆ ಸಿಕ್ಕುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.


ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.


ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು.


ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.


ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ


ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು