Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:23 - ಕನ್ನಡ ಸತ್ಯವೇದವು J.V. (BSI)

23 ಆಕೆಯ ಗಂಡನಾದ ಎಲ್ಕಾನನು ಆಕೆಗೆ - ನಿನಗೆ ಸರಿತೋರುವ ಪ್ರಕಾರ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಗಂಡನಾದ ಎಲ್ಕಾನನು, “ಹಾಗೆಯೇ ಆಗಲಿ; ನಿನಗೆ ಸರಿತೋರಿದಂತೆ ಮಾಡು. ಮಗು ಮೊಲೆಬಿಡುವವರೆಗೆ ಮನೆಯಲ್ಲೇ ಇರು. ಸರ್ವೇಶ್ವರ ನಿನ್ನ ಮಾತನ್ನು ದೃಢವಾಗಿಸಲಿ,” ಎಂದನು. ಮಗು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಆರೈಕೆ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, “ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ,” ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:23
12 ತಿಳಿವುಗಳ ಹೋಲಿಕೆ  

ದೇವರೇ, ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.


ಆತನು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - ನಿನ್ನನ್ನು ಹೊತ್ತ ಗರ್ಭವೂ


ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.


ಆಗ ಏಲಿಯು ಆಕೆಗೆ - ಸಮಾಧಾನದಿಂದ ಹೋಗು; ಇಸ್ರಾಯೇಲ್ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ ಎನ್ನಲು ಹನ್ನಳು ಏಲಿಗೆ -


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ರದ್ದುಮಾಡಿದ್ದರಿಂದ ಅಂಥವಳು ಯೆಹೋವನಿಂದ ದೋಷಿಯೆಂದು ಎಣಿಸಲ್ಪಡುವದಿಲ್ಲ.


ಸೌಲನು ತನ್ನ ಸೈನಿಕರನ್ನು ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ ಎಂದು ಕರೆಯಲು ಅವರು - ನಿನ್ನ ಇಷ್ಟದಂತೆ ಆಗಲಿ ಎಂದು ಹೇಳಿದರು. ಆದರೆ ಯಾಜಕನು - ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ ಅನ್ನಲು ಸೌಲನು -


ಆಗ ಸೌಲನು ಅವರಿಗೆ - ನೀವೆಲ್ಲರೂ ಒಂದು ಕಡೆಯಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು ಅನ್ನಲು ಅವರು - ನಿನ್ನ ಇಷ್ಟದಂತೆ ಆಗಲಿ ಅಂದರು.


ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆ ಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು