Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:24 - ಕನ್ನಡ ಸತ್ಯವೇದವು J.V. (BSI)

24 ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:24
9 ತಿಳಿವುಗಳ ಹೋಲಿಕೆ  

ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.


ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.


ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.


ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಬೆನೇಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು