1 ಸಮುಯೇಲ 1:28 - ಕನ್ನಡ ಸತ್ಯವೇದವು J.V. (BSI)28 ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿ |