Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:5 - ಕನ್ನಡ ಸತ್ಯವೇದವು J.V. (BSI)

5 ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಎಲ್ಕಾನನು ಹನ್ನಳಿಗೆ ಯಾವಾಗಲೂ ಎರಡು ಭಾಗವನ್ನು ಕೊಡುತ್ತಿದ್ದನು. ಯೆಹೋವನು ಹನ್ನಳಿಗೆ ಮಕ್ಕಳನ್ನು ಕೊಡದೇ ಇದ್ದರೂ, ಎಲ್ಕಾನನು ಎರಡು ಭಾಗವನ್ನು ಕೊಡುತ್ತಿದ್ದನು. ಎಲ್ಕಾನನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಹೀಗೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:5
9 ತಿಳಿವುಗಳ ಹೋಲಿಕೆ  

ಅವನು ಆಕೆಯ ಮೇಲೆ ಕೋಪಗೊಂಡು - ದೇವರು ನಿನಗೆ ಮಕ್ಕಳನ್ನು ಕೊಡದೆಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ ಅಂದನು.


ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು; ಬೆನ್ಯಾಮೀನನಿಗೋ ಮುನ್ನೂರು ರೂಪಾಯಿಗಳನ್ನೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.


ಮುಂಚೆ ಅಬ್ರಹಾಮನ ಹೆಂಡತಿಯಾದ ಸಾರಳ ನಿವಿುತ್ತ ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.


ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.


ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು.


ಯಾವನಾದರೂ ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದವರಾಗಿರಲಾಗಿ ಚೊಚ್ಚಲುಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ ಪಕ್ಷಕ್ಕೆ


ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು


ಸಾರಯಳು ಬಂಜೆಯಾಗಿದ್ದದರಿಂದ ಆಕೆಗೆ ಮಕ್ಕಳಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು