Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಆಕೆಯ ಸವತಿಯು - ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅವಳ ಗರ್ಭವನ್ನು ಮುಚ್ಚಿದ್ದರಿಂದ, ಅವಳ ಪ್ರತಿಸ್ಪರ್ಧಿಯಾದ ಪೆನಿನ್ನಳು ಹನ್ನಳಿಗೆ ಮನಗುಂದುವ ಹಾಗೆ ಬಹಳ ಕೆಣಕಿ ಬಾಧಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:6
8 ತಿಳಿವುಗಳ ಹೋಲಿಕೆ  

ಒಬ್ಬನು ಮನಗುಂದಿ ಸರ್ವಶಕ್ತನ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ ಅವನ ವಿುತ್ರನು ಅವನಿಗೆ ದಯೆ ತೋರಿಸತಕ್ಕದ್ದು.


ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ [ಎಂಬದೇ].


ಹೆಂಡತಿ ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನೂ ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನುಂಟುಮಾಡಬಾರದು.


ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು


ಪ್ರತಿವರ್ಷವೂ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಎಲ್ಕಾನನು ಹಾಗೆಯೇ ಮಾಡುತ್ತಿದ್ದದರಿಂದಲೂ ಪೆನಿನ್ನಳು ಆಕೆಯನ್ನು ರೇಗಿಸುತ್ತಿದ್ದದರಿಂದಲೂ ಹನ್ನಳು ಒಂದಾನೊಂದು ಸಾರಿ ಉಣ್ಣಲೊಲ್ಲದೆ ಅಳುತ್ತಾ ಇದ್ದಳು.


ಆಕೆಯು ತಿರಿಗಿ ತನ್ನ ತಂದೆಗೆ - ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು ಅನ್ನಲು ಅವನು -


ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು