Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:12 - ಕನ್ನಡ ಸತ್ಯವೇದವು J.V. (BSI)

12 ಆ ಸ್ಥಳದವನೊಬ್ಬನು - ಹಾಗಾದರೆ ಇವರ ತಂದೆ ಯಾರು ಎಂದು ಕೇಳಿದನು. ಈ ಸಂಗತಿಯಿಂದ ಸೌಲನು ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಆ ಸ್ಥಳೀಯರಲ್ಲಿ ಒಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಘಟನೆಯಿಂದಾಗಿ, “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೊ?” ಎಂಬ ಗಾದೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಗಿಬಿಯತ್ ಎಲೋಹಿಮಿನಲ್ಲಿ ವಾಸಿಸುತ್ತಿದ್ದ ಮನುಷ್ಯನೊಬ್ಬನು, “ಹೌದು, ಅವನು ಅವರ ನಾಯಕನಂತೆ ಕಾಣುತ್ತಿದ್ದಾನೆ” ಎಂದು ಹೇಳಿದನು. ಆದ್ದರಿಂದಲೇ, “ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನು” ಎಂಬ ಗಾದೆಯು ಹುಟ್ಟಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಅಲ್ಲಿಯವನೊಬ್ಬನು, “ಹಾಗಾದರೆ ಅವರ ನಾಯಕರು ಯಾರು?” ಎಂದನು. ಆದ್ದರಿಂದ, “ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂಬ ಗಾದೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:12
7 ತಿಳಿವುಗಳ ಹೋಲಿಕೆ  

ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವದು.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಅದಕ್ಕೆ ಯೇಸು - ನಾನು ಹೇಳುವ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದಾತನದು.


ಅವನು ಪ್ರವಾದಿಸಿ ಆದ ಮೇಲೆ ಪೂಜಾಸ್ಥಳಕ್ಕೆ ಬಂದನು.


ಅವನು ಅಲ್ಲಿಂದ ರಾಮದ ಮಠಕ್ಕೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವವರೆಗೆ ಪರವಶನಾಗಿ ಮಾತಾಡುತ್ತಾ ಹೋದನು.


ಅಲ್ಲಿಗೆ ಸೇರಿದ ಮೇಲೆ ಅವನೂ ತನ್ನ ಬಟ್ಟೆಗಳನ್ನು ತೆಗೆದು ಹಾಕಿ ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದದರಿಂದ - ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆಯುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು