Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:14 - ಕನ್ನಡ ಸತ್ಯವೇದವು J.V. (BSI)

14 ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ - ನೀವು ಎಲ್ಲಿಗೆ ಹೋಗಿದ್ದಿರಿ ಎಂದು ಕೇಳಲು ಅವನು - ಕತ್ತೆಗಳನ್ನು ಹುಡುಕುವದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ ನೋಡಿ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲ. ಆದುದರಿಂದ ಸಮುವೇಲನ ಬಳಿಗೆ ಹೋದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೌಲನ ಚಿಕ್ಕಪ್ಪನು ಸೌಲನನ್ನು ಮತ್ತು ಅವನ ಸೇವಕನನ್ನು, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಸೌಲನು ಅವನಿಗೆ, “ನಾವು ಕತ್ತೆಗಳನ್ನು ಹುಡುಕುತ್ತಿದ್ದೆವು. ನಾವು ಅವುಗಳನ್ನು ಕಂಡುಕೊಳ್ಳಲಾರದೆ ಹೋದಾಗ ಸಮುವೇಲನನ್ನು ನೋಡಲು ಹೋದೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಸೌಲನ ಚಿಕ್ಕಪ್ಪನು, “ನೀವು ಎಲ್ಲಿಗೆ ಹೋದಿರಿ?” ಎಂದು ಅವನನ್ನೂ, ಅವನ ಸೇವಕನನ್ನೂ ಕೇಳಿದನು. ಅದಕ್ಕವನು, “ಕತ್ತೆಗಳನ್ನು ಹುಡುಕುವುದಕ್ಕೆ, ಅವುಗಳನ್ನು ಕಾಣದೆ ಹೋದುದರಿಂದ ಸಮುಯೇಲನ ಬಳಿಗೆ ಹೋದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:14
5 ತಿಳಿವುಗಳ ಹೋಲಿಕೆ  

ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿಯು; ನೇರನು ಸೌಲನ ಚಿಕ್ಕಪ್ಪನು.


ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.


ಅವನು ಪ್ರವಾದಿಸಿ ಆದ ಮೇಲೆ ಪೂಜಾಸ್ಥಳಕ್ಕೆ ಬಂದನು.


ಸಮುವೇಲನು ಏನು ಹೇಳಿದನೆಂದು ಚಿಕ್ಕಪ್ಪನು ಕೇಳಲು ಸೌಲನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು