Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:16 - ಕನ್ನಡ ಸತ್ಯವೇದವು J.V. (BSI)

16 ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು ಎಂಬದಾಗಿ ಹೇಳಿದನೇ ಹೊರತು ಅವನು ಹೇಳಿದ ರಾಜ್ಯದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೌಲನು, “ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು,” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ಆ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:16
9 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು; ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ಸಮುವೇಲನು ಸೌಲನಿಗೆ - ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿಯೊಂದುಂಟು ಎಂದನು.


ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಮತ್ತು ಇಸ್ರಾಯೇಲ್ಯರ ಶ್ರೇಷ್ಠವಸ್ತುಗಳೆಲ್ಲಾ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೋ ಅಂದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು.


ಸಮುವೇಲನು ಏನು ಹೇಳಿದನೆಂದು ಚಿಕ್ಕಪ್ಪನು ಕೇಳಲು ಸೌಲನು -


ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರು ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬದನ್ನು ಅವರಿಗೆ ತಿಳಿಸಲಿಲ್ಲ.


ಜಾಣನು ತಿಳಿದದ್ದನ್ನು ಗುಪ್ತಪಡಿಸುವನು; ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವದು.


ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತಾಡುವ ಸಮಯ, ಪ್ರೀತಿಸುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು