1 ಸಮುಯೇಲ 10:2 - ಕನ್ನಡ ಸತ್ಯವೇದವು J.V. (BSI)2 ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ; ಅವರು ನಿನಗೆ - ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂಬದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈ ದಿನ ನೀನು ನನ್ನನ್ನು ಬಿಟ್ಟುಹೋದನಂತರ, ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಖೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ವ್ಯಕ್ತಿಗಳನ್ನು ಕಾಣುವೆ; ಅವರು, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆ ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂದು ನಿನಗಾಗಿ ಹಂಬಲಿಸುತ್ತಾ ಇರುತ್ತಾರೆ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು. ಅಧ್ಯಾಯವನ್ನು ನೋಡಿ |