Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:20 - ಕನ್ನಡ ಸತ್ಯವೇದವು J.V. (BSI)

20 ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಸಮುವೇಲನು ಇಸ್ರಯೇಲರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟು ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಮುವೇಲನು ಇಸ್ರೇಲಿನ ಎಲ್ಲಾ ಕುಲದವರನ್ನು ಹತ್ತಿರಕ್ಕೆ ಕರೆದನು. ನಂತರ ಸಮುವೇಲನು ಹೊಸ ರಾಜನನ್ನು ಆರಿಸಲು ಚೀಟು ಹಾಕತೊಡಗಿದನು. ಮೊದಲನೆಯದಾಗಿ, ಬೆನ್ಯಾಮೀನ್ ಕುಲವು ಆರಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸಮುಯೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸಮೀಪಕ್ಕೆ ಬರಮಾಡಿದಾಗ, ಬೆನ್ಯಾಮೀನನ ಗೋತ್ರಕ್ಕೆ ಚೀಟು ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:20
9 ತಿಳಿವುಗಳ ಹೋಲಿಕೆ  

ಅನಂತರ ಸೌಲನು - ಇಸ್ರಾಯೇಲ್ ದೇವರೇ ಸತ್ಯವನ್ನು ತಿಳಿಸು ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಲ್ಲಿ ಅದು ಅವನಿಗೂ ಯೋನಾತಾನನಿಗೂ ಬಂದಿತು; ಜನರು ಪಾರಾದರು.


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು.


ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.


ಆಗ ಸೌಲನು ಪ್ರಜೆಯ ಮುಖಂಡರಿಗೆ - ನೀವೆಲ್ಲರೂ ಇಲ್ಲಿ ಬಂದು ಈ ಹೊತ್ತು ಪಾಪ ಯಾವದರಿಂದುಂಟಾಯಿತೋ ವಿಚಾರಿಸಿ ಗೊತ್ತುಮಾಡಿರಿ.


ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲ್ಯರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವದಕ್ಕೋಸ್ಕರ ಹೆಬ್ರೋನಿಗೆ ಹೊರಟನು.


ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ ಹೀಗಂದನು - ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ನಿವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು