Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:24 - ಕನ್ನಡ ಸತ್ಯವೇದವು J.V. (BSI)

24 ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:24
14 ತಿಳಿವುಗಳ ಹೋಲಿಕೆ  

ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.


ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.


ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆದುಕೊಂಡವನನ್ನೇ ನೇವಿುಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇವಿುಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇವಿುಸಬಾರದು.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದರು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ಇವನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿ ಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತವಾಗಿದ್ದನು.


ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು.


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.


ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು - ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದನು.


ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು.


ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು