Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:26 - ಕನ್ನಡ ಸತ್ಯವೇದವು J.V. (BSI)

26 ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:26
12 ತಿಳಿವುಗಳ ಹೋಲಿಕೆ  

ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.


ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.


ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಅವುಗಳ ಗ್ರಾಮಗಳೂ ಇವೇ. ಬೆನ್ಯಾಮೀನ್ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ದೇವರ ವಾಕ್ಯವನ್ನು ಹೊಗಳಿದರು; ಮತ್ತು ನಿತ್ಯಜೀವಕ್ಕೆ ನೇವಿುಸಲ್ಪಟ್ಟವರೆಲ್ಲರು ನಂಬಿದರು.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.


ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ನಿಂತರು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಪ್ರಧಾನರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಲಯಕಟ್ಟುವದಕ್ಕಾಗಿ ಹೊರಟುಹೋದರು.


ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು.


ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ [ಅನ್ನುತ್ತಾರೆ], ರಾಮಾ ನಡುಗುತ್ತದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು