Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:27 - ಕನ್ನಡ ಸತ್ಯವೇದವು J.V. (BSI)

27 ಕೆಲವು ಮಂದಿ ಕಾಕಪೋಕರು - ಇವನೋ ನಮ್ಮನ್ನು ರಕ್ಷಿಸುವವನು ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:27
21 ತಿಳಿವುಗಳ ಹೋಲಿಕೆ  

ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ


ಆದದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದದರಿಂದ ಇವನ ಧನಘನತೆಗಳು ಹೆಚ್ಚಾದವು.


ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.


ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿತೆರೆಯುವದೇ ಇಲ್ಲ.


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.


ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ ಅವರನ್ನು ನೆಲಕ್ಕೆ ಹಾಕಿಸಿ ಹಗ್ಗದಿಂದ ಅಳತೆ ಮಾಡಿಸಿ ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲು ಉಳಿಸಿದನು. ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ತರುವಾಯ ಜನರು ಸಮುವೇಲನಿಗೆ - ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ ಎನ್ನಲು ಸೌಲನು ಅವರಿಗೆ -


ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು.


ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮೂರ್ಖನಾದ ಅವನೊಡನೆ ಮಾತಾಡುವದಸಾಧ್ಯ ಎಂದು ಹೇಳಿದನು.


ದಾವೀದನ ಜೀವಮಾನದಲ್ಲೆಲ್ಲಾ ಅವನ ವಿುತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ತಂದೆಗೆ ಬದಲಾಗಿ ಅಭಿಷೇಕಿಸಲ್ಪಟ್ಟನೆಂದು ಕೇಳಿದಾಗ ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು; ನಿನ್ನ ಆಳು ನಿನ್ನನ್ನು ಶಪಿಸುವದು ಕಿವಿಗೆ ಬಿದ್ದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು