Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:11 - ಕನ್ನಡ ಸತ್ಯವೇದವು J.V. (BSI)

11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:11
14 ತಿಳಿವುಗಳ ಹೋಲಿಕೆ  

ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಅದಕ್ಕೆ ಅವನು - ಎಲ್ಲಾ ಇಸ್ರಾಯೇಲ್ಯರನ್ನು ಅವಮಾನಪಡಿಸುವದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುತ್ತೇನೆ ಎಂದು ಉತ್ತರಕೊಟ್ಟನು.


ಇದು ಅಬೀಮೆಲೆಕನಿಗೆ ಗೊತ್ತಿದ್ದದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವದನ್ನು ಇವನು ಕಾಣುತ್ತಲೆ ಅಲ್ಲಿಂದ ಎದ್ದು ಅವರನ್ನು ಹೊಡೆದನು.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಫರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲಾ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು - ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ


ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.


ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು