Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:13
11 ತಿಳಿವುಗಳ ಹೋಲಿಕೆ  

ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.


ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಕೆಲವು ಮಂದಿ ಕಾಕಪೋಕರು - ಇವನೋ ನಮ್ಮನ್ನು ರಕ್ಷಿಸುವವನು ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಇಸ್ರಾಯೇಲ್ಯರು ಹೋದನಂತರ ಇವನು ನಿಂತು ಕತ್ತಿ ಹಿಡಿದ ಕೈ ಸೋತು ಮರಗಟ್ಟಿ ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲ್ಯರು ಸುಲುಕೊಳ್ಳುವದಕ್ಕೋಸ್ಕರವೇ ಹಿಂದಿರುಗಿದರು.


ಅನಂತರ ಅರಸನು ಶಿಮ್ಮಿಗೆ - ನಿನಗೆ ಮರಣ ಶಿಕ್ಷೆಯಾಗುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು