Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:2 - ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಅವನು - ಎಲ್ಲಾ ಇಸ್ರಾಯೇಲ್ಯರನ್ನು ಅವಮಾನಪಡಿಸುವದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಅವನು, “ಇಸ್ರಯೇಲರೆಲ್ಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತು ಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಸಂಧಾನ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:2
11 ತಿಳಿವುಗಳ ಹೋಲಿಕೆ  

ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು.


ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವದಕ್ಕಾಗುವದಿಲ್ಲ; ಹಾಗೆ ಕೊಡುವದು ನಮಗೆ ಅಪಮಾನ.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.


ಶಿಷ್ಟನು ತನ್ನ ದನದ ಕ್ಷೇಮವನ್ನು ಲಕ್ಷಿಸುತ್ತಾನೆ; ದುಷ್ಟನ ವಾತ್ಸಲ್ಯವೋ ಕ್ರೂರತನವೇ.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.


ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದ್ದೀ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ ಕುಚೋದ್ಯಕ್ಕೂ ಈಡಾದೆವು.


ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ - ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿಕಾಣುವ ಪ್ರಕಾರ ಮಾಡಿರಿ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು