Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:6 - ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸರ್ವೇಶ್ವರನ ಆತ್ಮ ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:6
14 ತಿಳಿವುಗಳ ಹೋಲಿಕೆ  

ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವದನ್ನು ಕಂಡನು. ದೇವರ ಆತ್ಮವು ಅವನ ಮೇಲೆ ಬಂದದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು.


ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಇದಲ್ಲದೆ ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್‍ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸಹತ್ತಿತು.


ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರಿಗಿ ಗಿಲ್ಯಾದಿನ ವಿುಚ್ಪೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.


ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಆ ಮೋಶೆ ಭೂವಿುಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹುಸಾತ್ವಿಕನು.


ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದದರಿಂದ


ಆಗ ಯೆಹೋವನ ಆತ್ಮವು ನಿನ್ನ ಮೇಲೂ ಬರುವದರಿಂದ ನೀನೂ ಮಾರ್ಪಟ್ಟು ಪ್ರವಾದಿಸುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು