Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:7 - ಕನ್ನಡ ಸತ್ಯವೇದವು J.V. (BSI)

7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿ - ಯಾರು ಸೌಲ ಸಮುವೇಲರನ್ನು ಹಿಂಬಾಲಿಸುವದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು ಎಂದು ಹೇಳಿಸಿದನು. ಯೆಹೋವನ ಭಯಪ್ರೇರಿತರಾಗಿ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:7
8 ತಿಳಿವುಗಳ ಹೋಲಿಕೆ  

ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರಿಗೆ ಯೆಹೋವನ ಭಯವಿದ್ದದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.


ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೇ ಹೆದರಿಕೊಳ್ಳಿರಿ, ನಡುಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು