1 ಸಮುಯೇಲ 12:17 - ಕನ್ನಡ ಸತ್ಯವೇದವು J.V. (BSI)17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು. ಅಧ್ಯಾಯವನ್ನು ನೋಡಿ |