Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:19 - ಕನ್ನಡ ಸತ್ಯವೇದವು J.V. (BSI)

19 ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:19
24 ತಿಳಿವುಗಳ ಹೋಲಿಕೆ  

ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು.


ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.


ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ ಅಂದರು.


ಸಮುವೇಲನು ತಿರಿಗಿ ಅವರಿಗೆ - ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿ ಕೂಡಿ ಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು ಅನ್ನಲು


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು


ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ಆತನು ದಂಡನೆಗಾಗಲಿ ತನ್ನ ಭೂವಿುಯ ಹಿತಕ್ಕಾಗಲಿ ಕೃಪೆದೋರುವದಕ್ಕಾಗಲಿ ಆ ಮೇಘಗಳನ್ನು ಬರಮಾಡುವನು.


ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ.


ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;


ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.


ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇವಿುಸಿಕೊಡು ಎಂಬ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಲು ಆತನು ಅವನಿಗೆ -


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು