Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:3 - ಕನ್ನಡ ಸತ್ಯವೇದವು J.V. (BSI)

3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:3
29 ತಿಳಿವುಗಳ ಹೋಲಿಕೆ  

ನಾನು ಯಾರ ಬೆಳ್ಳಿಬಂಗಾರವನ್ನಾಗಲಿ ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಅದಕ್ಕೆ ಮೋಶೆ ಬಹು ಕೋಪಗೊಂಡು ಯೆಹೋವನಿಗೆ - ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ ಎಂದು ಮನವಿಮಾಡಿದನು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ಅವನು ತನ್ನ ಜನರಿಗೆ - ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ಒಡೆಯನೂ ಆಗಿದ್ದಾನೆ; ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿಮಾಡಲಿ ಎಂದು ಹೇಳಿದನು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು.


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ, ಮತ್ತು ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.


ಮತ್ತೊಬ್ಬನ ಮನೆಯನ್ನು ಆಶಿಸಬಾರದು; ಮತ್ತೊಬ್ಬನ ಹೆಂಡತಿ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.


ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಅವನು ಆಯಾ ವಸ್ತುಗಳನ್ನೇ ಅಂದರೆ ಕದ್ದದ್ದನ್ನೂ ಮೋಸದಿಂದ ಪಡೆದದ್ದನ್ನೂ ತನ್ನ ವಶಕ್ಕೆ ತೆಗೆದುಕೊಂಡದ್ದನ್ನೂ ತಾನು ಕಂಡುಕೊಂಡದ್ದನ್ನೂ


ಕದ್ದದ್ದು ಎತ್ತಾದರೂ ಕತ್ತೆಯಾದರೂ ಆಡುಕುರಿಯಾದರೂ ಸರಿಯೇ ಅದು ಜೀವದಿಂದಲೇ ಕಳ್ಳನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡುಕೊಡಬೇಕು.


ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.


ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ ನಮ್ಮಿಂದ ಏನಾದರೂ ಕಸಕೊಂಡದ್ದಾಗಲಿ ಇರುವದಿಲ್ಲ ಎಂದು ಉತ್ತರಕೊಟ್ಟರು.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ಬೇರೆ ಯಾವದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನೂ ಪೂರ್ತಿಯಾಗಿ ತಂದುಕೊಡಬೇಕಲ್ಲದೆ ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ಅದರ ನ್ಯಾಯವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.


ಈ ಮಾತುಗಳಿಂದ ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ಅವರ ಹೊಲ, ದ್ರಾಕ್ಷೇತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ಶೇಕಡಾ ಇಷ್ಟೆಂದು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈಹೊತ್ತೇ ಹಿಂದಕ್ಕೆ ಕೊಡಿರಿ ಎಂದು ಹೇಳಿದೆನು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು