Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:2 - ಕನ್ನಡ ಸತ್ಯವೇದವು J.V. (BSI)

2 ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:2
24 ತಿಳಿವುಗಳ ಹೋಲಿಕೆ  

ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.


ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ


ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಫಿಲಿಷ್ಟಿಯರ ಕಾವಲುದಂಡು ವಿುಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.


ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ಘೋರ ಯುದ್ಧವಿದ್ದದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.


ಉತ್ತರದಿಕ್ಕಿನದು ಎತ್ತರವಾಗಿ ವಿುಕ್ಮಾಷಿಗೂ ದಕ್ಷಿಣದಿಕ್ಕಿನದು ಗೆಬಕ್ಕೂ ಎದುರಾಗಿದ್ದವು.


ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಆಗ ದಣಿಯು - ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ ಅಂದನು.


ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಅವುಗಳ ಗ್ರಾಮಗಳೂ ಇವೇ. ಬೆನ್ಯಾಮೀನ್ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಸೌಲನು ಅರಸನಾದಾಗ [ಮೂವತ್ತು] ವರುಷದವನಾಗಿದ್ದನು. ಅವನು ಇಸ್ರಾಯೇಲ್ಯರನ್ನು ಎರಡು ವರುಷ ಆಳಿದನಂತರ


ಸಮುವೇಲನು ಅವನನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಅವನು - ಜನರು ಚದರಿಹೋಗುವದನ್ನೂ ನೀನು ನಿಯವಿುತಕಾಲದಲ್ಲಿ ಬಾರದಿರುವದನ್ನೂ ಫಿಲಿಷ್ಟಿಯರು ವಿುಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವದನ್ನೂ ನೋಡಿ -


ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರುನೂರು ಮಂದಿಯಿದ್ದರು.


ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳುಕೊಂಡರು. ಫಿಲಿಷ್ಟಿಯರು ವಿುಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.


ಆಗ ಸೌಲನು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಅವರನ್ನು ಆಶೀರ್ವದಿಸಿ ಕಳುಹಿಸಿದನು.


ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.


ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬವನ ಮಗನಾದ ಇತ್ತೈ,


ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು