Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:3 - ಕನ್ನಡ ಸತ್ಯವೇದವು J.V. (BSI)

3 ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:3
12 ತಿಳಿವುಗಳ ಹೋಲಿಕೆ  

ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲ್ಯರು ಅವನ ಬಳಿಗೆ ಬಂದು ಗಟ್ಟಾ ಇಳಿದು ಅವನ ಸಂಗಡ ಹೊರಟರು.


ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.


ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ [ಅನ್ನುತ್ತಾರೆ], ರಾಮಾ ನಡುಗುತ್ತದೆ,


ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇವಿುನಲ್ಲಿ ಕಾವಲುದಂಡನ್ನಿಟ್ಟಿದ್ದರು.


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಆಗ ಜನರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟದರಿಂದ ಯುದ್ಧವು ನಿಂತುಹೋಯಿತು.


ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳುಕೊಂಡರು. ಫಿಲಿಷ್ಟಿಯರು ವಿುಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.


ಬೆನ್ಯಾಮೀನ್ ಕುಲದಿಂದ ಗಿಬ್ಯೋನ್, ಗೆಬ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು